
ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಾವುದೇ ಸಮಿತಿಗಳಿಗೆ ಗ್ರಾಮ ಪಂಚಾಯಿತಿ ಸದಸ್ಯರನ್ನು ಪರಿಗಣಿಸದೇ ಇರುವುದನ್ನು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯವ ಒಕ್ಕೂಟದ ರಾಜ್ಯ ಸಂಚಾಲಕ ನಾಗೇಶ್ ಖಂಡಿಸಿದರು.
ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಸಮಿತಿಗಳಿಗೆ ವಿಧಾನಸಭಾ ಸದಸ್ಯರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಜಿಲ್ಲೆಯಲ್ಲಿ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಗ್ರಾ.ಪಂ ಸದಸ್ಯರು ಚುನಾಯಿತರಾಗಿದ್ದಾರೆ, ಗ್ರಾಪಂ ಸದಸ್ಯರನ್ನು ಸಮಿತಿಗಳಿಗೆ ಪರಿಗಣಿಸುವಂತೆ ಮನವಿ ಮಾಡಿದ್ದು, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜನರಿಂದ ಮತಪಡೆದು ಚುನಾಯಿತರಾದರೂ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹೋರಾಟ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿರುವುದು ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ವಿರೋಧಿ ನಡೆ ಎಂದು ಖಂಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಹಾಗೂ ಜಿಲ್ಲಾಧಿಕಾರಿಗಳು ಕೂಡಲೇ ಗ್ರಾ.ಪಂ ಸದಸ್ಯರನ್ನು ಸಮಿತಿಗಳಿಗೆ ಆಯ್ಕೆ ಮಾಡಲು ಕ್ರಮ ಕೈಗೊಳ್ಳದಿದ್ದರೆ ಸಮ್ಮೇಳನಕ್ಕೆ ಜಿಲ್ಲೆಯ 250ಕ್ಕೂ ಹೆಚ್ಚು ಗ್ರಾ.ಪಂಗಳಿಂದ ನೀಡುವ 5000 ರೂಗಳ ವಂತಿಗೆ ನಿಲ್ಲಿಸಿ,ಜಿಲ್ಲೆಯ ಎಲ್ಲಾ ಗ್ರಾ.ಪಂ ಸದಸ್ಯರಿಂದ ಸಮ್ಮೇಳನವನ್ನು ಬಹಿಷ್ಕರಿಸಲಾಗುವುದು, .
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಪ್ರದೀಪ್ ಸಿದ್ದೇಗೌಡ, ಗೌರದ ಅಧ್ಯಕ್ಷೆ ಮಹೇಶ್, ಕಾರ್ಯದರ್ಶಿ ಕೆಂಪೇಗೌಡ, ಸಂಘಟನಾ ಕಾರ್ಯದರ್ಶಿ ಬಸವರಾಜು, ಚಾಮರಾಜು,ಆನಂದ್, ಮಾನಸ ಇದ್ದರು.

Leave a Reply