
ಮಂಡ್ಯ: ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನಂದಿನಿ ಕೆ ಆರ್ ಅವರಿಗೆ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದಿಂದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಆತ್ಮೀಯ ಸ್ವಾಗತ ಕೋರಲಾಯಿತು.
ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರಿಗಳು ಸರಿಯಾದ ವೇಳೆಗೆ ಹೋಗದೆ ಇರುವುದು, ಕಚೇರಿಯಲ್ಲಿ ಅಧಿಕಾರಿಗಳು ಇಲ್ಲದೆ ಇರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಒಕ್ಕೂಟದ ಪದಾಧಿಕಾರಿಗಳು ಸಿಇಓ ರವರ ಗಮನಕ್ಕೆ ತಂದರು.
ಜಿಲ್ಲಾ ಪಂಚಾಯತ್ ಸಿಇಓ ನಂದಿನಿ ಕೆ ಆರ್ ಮಾತನಾಡಿ ಎಲ್ಲ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಸಹಕಾರ ನೀಡಿ,ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಸಹಕರಿಸಿ, ನಿಮ್ಮ ಗ್ರಾಮದ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದ ಕೂಡಲೇ ಬಗೆಹರಿಸಲು ಪ್ರಯತ್ನಿಸುತ್ತೇನೆ, ಗ್ರಾಮ ಪಂಚಾಯಿತಿಗಳಿಗೆ ದಿಡೀರ್ ಭೇಟಿ ಅಧಿಕಾರಿಗಳ ಕೆಲಸ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಎಂಬ ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಗೌರವಾಧ್ಯಕ್ಷ ಬೇವಿನಹಳ್ಳಿ ಮಹೇಶ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುವರ್ಣಾವತಿ ಗ್ರಾಮ ಪಂಚಾಯತಿ ಸದಸ್ಯರಾದ ಅರ್ಪಿತ .ಕೆಂಪೇಗೌಡ . ಒಕ್ಕೂಟದ ರಾಜ್ಯ ಸಂಚಾಲಕ ನಾಗೇಶ್, ಒಕ್ಕೂಟದ ಮಾರ್ಗದರ್ಶಕರಾದ ಎಂ.ಚಾಮರಾಜು ಇತರರು ಇದ್ದರು.

Leave a Reply