Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ವಾಸದ ಮನೆಗಳ ಅಕ್ಕ ಪಕ್ಕದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ವಿರೋಧ : ಸಿಇಓಗೆ ಮನವಿ

ವಾಸದ ಮನೆಗಳ ಅಕ್ಕ ಪಕ್ಕದಲ್ಲಿ ಅವೈಜ್ಞಾನಿಕ ಮತ್ತು ನಿಯಮಬಾಹಿರವಾಗಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡುತ್ತಿರುವುದನ್ನು ನಿಲ್ಲಿಸುವಂತೆ ದೊಡ್ಡಗರುಡನಹಳ್ಳಿ ಗ್ರಾಮ ಪಂಚಾಯಿತಿ ವಾಪ್ತಿಯ ಹೊಢಾಘಟ್ಟ ಗ್ರಾಮಸ್ಥರು ಜಿ.ಪಂ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಂಡ್ಯ ತಾಲೂಕಿನ ಬಸರಾಳು ಹೋಬಳಿ ದೊಡ್ಡಗರುಡನಹಳ್ಳಿ ಗ್ರಾಮ ಪಂಚಾಯಿತಿ ವಾಪ್ತಿಯ ಹೊಡಾಘಟ್ಟ ಗ್ರಾಮದ ಮಧ್ಯಭಾಗದಲ್ಲಿ ನಿವಾಸಿಗಳ ಮನೆಗಳ ಸಮೀಪವೇ ನಿಯಮಬಾಹಿರ ಮತ್ತು ಅವೈಜ್ಞಾನಿಕವಾಗಿ ಜಲಜೀವನ್ ಮಿಷಿನ್ ಯೋಜನೆಯಲ್ಲಿ ಕುಡಿಯುವ ನೀರಿನ ದೊಡ್ಡ ಟ್ಯಾಂಕ್ ನಿರ್ಮಾಣ ಮಾಡುತ್ತಿರುವುದು ನಮಗೆ ಆತಂಕ ತಂದಿದೆ ಎಂದು ದೂರಿದರು.
ಜೆಜೆಎಮ್ ಯೋಜನೆಯಡಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡುತ್ತಿದ್ದು ಸದರಿ ಟ್ಯಾಂಕ್ ನಿರ್ಮಾಣ ಮಾಡುತ್ತಿರುವ ಕೇವಲ ಮೂರಾಲ್ಕು ಅಡಿ ಅಂತರದಲ್ಲಿ ನಾಲ್ಕು ದಿಕ್ಕುಗಳಲ್ಲೂ ವಾಸದ ಮನೆಗಳಿದ್ದು, ಸಾರ್ವಜನಿಕರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ತಿರುಗಾಡಲು ಸಹ ಆಗದಂತೆ ಅಕ್ಕ ಪಕ್ಕ ನಿವಾಸಿಗಳ ಒಪ್ಪಿಗೆ ಇಲ್ಲದಿದ್ದರೂ ದೊಡ್ಡ ಅನಾಹುತವನ್ನು ತಂದೊಡ್ಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಗ್ರಾ.ಪಂ ಅಧ್ಯಕ್ಷರು, ಅಧಿಕಾರಿಗಳು ಸೇರಿ, ಏಕಾಏಕಿ ಸ್ಥಳಕ್ಕೆ ಜೆಸಿಬಿ ವಾಹನದಿಂದ ತುಂಬಾ ಆಳವಾದ ಅಡಿಪಾಯವನ್ನು ತೋಡಿದ್ದು ಜನರಿಗೆ ಹಾಗೂ ಜಾನುವಾರುಗಳಿಗೆ ತುಂಬಾ ತೊಂದರೆಯಾಗುವ ರೀತಿಯಲ್ಲಿ ಕಾಮಗಾರಿ ಮಾಡಿರುತ್ತಾರೆ ಜೆಜೆಎಮ್ ಯೋಜನೆಯಡಿ ಒಟಿಹೆಚ್ ಟ್ಯಾಂಕ್ ನಿರ್ಮಾಣ ಮಾಡಲು ಊರಿನ ಹೊರಭಾಗದಲ್ಲಿ ಸಾಕಷ್ಟು ಜಾಗಗಳಿದ್ದರೂ, ಅಲ್ಲಿ ಮಾಡುತ್ತಿಲ್ಲ ಎಂದು ಕಿಡಿಕಾರಿದರು.
ಅಲ್ಲದೆ ಸದರಿ ಟ್ಯಾಂಕ್ ನಿರ್ಮಾಣ ಮಾಡಲು ಮತ್ತೊಂದು ಜಾಗದಲ್ಲಿ ಪಾಯ ತೆಗದು ಕೆಲಸ ಆರಂಬಿಸಿ ನಿಲ್ಲಿಸಿರುತ್ತಾರೆ. ಟ್ಯಾಂಕ್ ನಿರ್ಮಾಣ ಮಾಡಲು ಇರುವ ಮಾನದಂಡಗಳನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಸುತ್ತಲೂ ಎತ್ತರದ ಎರಡು ಪಟ್ಟು ಜಾಗವಿಲ್ಲದ ಕಿರಿದಾದ ಸ್ಥಳದಲ್ಲಿ ನಿರ್ಮಿಸುತ್ತಿದ್ದಾರೆ ಎಂದು ಹೇಳಿದರು.
ಸ್ಥಳೀಯ ನಿವಾಸಿಗಳಿಗೆ ಯಾವ ಸಮಯದಲ್ಲಿ ನಮ್ಮ ಮನೆಗಳ ಮೇಲೆ ಟ್ಯಾಂಕ್ ಬೀಳುವುದೋ ಎಂಬ ಆತಂಕದಲ್ಲಿಯೇ ಮುಂದೆ ಜೀವನ ಮಾಡಬೇಕಾಗಿರುತ್ತದೆ. ಆದ್ದರಿಂದ ಗ್ರಾಮದ ಹೊರಬಾಗದಲ್ಲಿ ಓವರ್ ಹೆಡ್ ಟ್ಯಾಂಕನ್ನು ನಿರ್ಮಾಣ ಮಾಡಬೇಕೆಂದು ಕೋರಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಅನುಪಮಾ, ರಾಜು, ಪಟೇಲ್ ಆನಂದ್, ರಾಮೇಗೌಡ, ಗೀತಾಮೋಹನ್, ಮಂಜುನಾಥ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

error: Content is protected !!