Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಹಕರಿಸಿ : ಬಿ.ಆರ್ ರಾಮಚಂದ್ರು

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಬೂತ್‌ಗಳಲ್ಲಿ ಮತಪಟ್ಟಿ ಪರಿಷ್ಕರಣೆಯನ್ನು ಮಾಡುವ ಕೆಲಸವನ್ನು ಮಾಡ ಬೇಕೆಂದು ಮಂಡ್ಯ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ತಿಳಿಸಿದರು.
ಮಂಡ್ಯದ ಕೋಣನಹಳ್ಳಿ ಬೆಳಕು ರೆಸಾರ್ಟ್ ನಲ್ಲಿ ನೆಡೆದ ಮಂಡ್ಯ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ  ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದ ಪ್ರತಿಯೊಂದು ಬೂತ್‌ಗಳಲ್ಲಿ ಬಿಎಲ್‌ಎಗಳು ಪರಿಷ್ಕರಣೆಗಾಗಿ ಹೋದಾಗ ಜೆಡಿಎಸ್ ಕಾರ್ಯ ಕರ್ತರು ಜತೆಯಲ್ಲಿದ್ದುಕೊಂಡು ಸಹಕಾರ ನೀಡಬೇಕು.
ಮೃತರಾದವರು,ಗ್ರಾಮ,ಪಟ್ಟಣ ಬಿಟ್ಟು ಹೋಗಿರುವವ ರನ್ನು ಗುರುತಿಸಬೇಕು ಮತ್ತು ಎರಡು ಕಡೆಗಳಲ್ಲಿ ಬರುವ ಹೆಸರನ್ನು ತೆಗೆದು ಹಾಕುವ ಕೆಲಸ ಮಾಡಬೇಕು. 18 ವರ್ಷ ತುಂಬಿದವರನ್ನು ಹೊಸ ಮತದಾರರ ಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು.ಜತೆಗೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಅರ್ಹ ಮತದಾರರು ಮಾತ್ರ ಮತದಾನ ಮಾಡುವಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಬೂತ್ ಏಜೆಂಟರದ್ದಾಗಿ ರುತ್ತದೆ. ಆದ್ದರಿಂದ ಈ ಬಗ್ಗೆ ಸಮಪರ್ಕವಾಗಿ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ, ನಗರ ಸಭೆ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸದೃಢ ಗೊಳಿಸಬೇಕು.ಇದು ಕಾರ್ಯಕರ್ತರ ಚುನಾವಣೆ ಆಗಿರುವುದರಿಂದ ಸಣ್ಣಪುಟ್ಟ ತಪ್ಪುಗಳಿದ್ದರೆ ಸರಿಪಡಿಸಿಕೊಂಡು  ಜೆಡಿಎಸ್ ಪಕ್ಷದಿಂದ ಯಾರೇ ಅಭ್ಯರ್ಥಿಗಳಾದರೂ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡಬೇಕು  ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ರಾಜ್ಯಾದ್ಯಂತ ಪ್ರವಾಸ ಮಾಡಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿಗೆ ಪಕ್ಷ ಸಂಘಟನೆ ಮಾಡುತ್ತಿದ್ದಾರೆ.ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮ ನಡೆದಾಗ 8,000 ಸದಸ್ಯತ್ವ ದಾಟಿತ್ತು. ಬೇರೆ ವಿಧಾನಸಭಾ ಕ್ಷೇತ್ರಗಳಲ್ಲಿ 20,000 ಸದಸ್ಯತ್ವವನ್ನು ಮಾಡಿದ್ದಾರೆ  ಆದ್ದರಿಂದ ಮುಂಬರುವ ಮಾರ್ಚ್ ಯುಗಾದಿಯೊಳಗೆ ಮಂಡ್ಯ ಕ್ಷೇತ್ರದಲ್ಲಿ 20 ಸಾವಿರ ಜೆಡಿಎಸ್ ಸದಸ್ಯತ್ವವನ್ನು ಮಾಡಬೇಕು ಎಂದು ತಿಳಿಸಿದರು.
ಪ್ರತಿಯೊಂದು ಬೂತ್ ಸಮಿತಿಯಲ್ಲಿ ಎಲ್ಲಾ ಸಮುದಾಯದವರು ಇರಬೇಕು ಆ ರೀತಿಯಾಗಿ ಬೂತ್ ಕಮಿಟಿ ರಚನೆ ಮಾಡಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 15 ರಿಂದ 20 ಮಂದಿ ಜೆಡಿಎಸ್ ಅಭ್ಯರ್ಥಿಗಳು  ಎರಡು ಸಾವಿರಕ್ಕೂ ಕಡಿಮೆ ಮತಗಳ ಅಂತರದಿಂದ ಸೋತಿದ್ದೇವೆ ಈ ಈ ಹಿನ್ನೆಲೆಯಲ್ಲಿ ಬೂತ್ ಸಮಿತಿಗಳನ್ನು ರಚನೆ ಮಾಡಿಕೊಂಡು ಜೆಡಿಎಸ್ ಪಕ್ಷದ ಸಂಘಟನೆಗೆ ಕಾರ್ಯಕರ್ತರು ಮುಂದಾಗಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಪ್ರದೀಪ್ ಅವರು ಮಂಡ್ಯ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಜಿ.ಬಿ.ಶಿವ ಕುಮಾರ್, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇ ಗೌಡ, ನಗರಸಭೆ ಮಾಜಿ ಅಧ್ಯಕ್ಷರಾದ ನಾಗೇಶ್, ನಾಗಮ್ಮ, ಮಾಜಿ ಸದಸ್ಯರಾದ ಮಧುಶ್ರೀ, ಪದ್ಮಾವತಿ, ಶಿವರತ್ನ, ಜಯಶೀಲಮ್ಮ, ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸಾತನೂರು ಜಯರಾಮ್ , ನವೀನ್ ಕುಮಾರ್, ಬೋರೇಗೌಡ ಸೇರಿದಂತೆ ಮತ್ತಿತರರು ಭಾಗವಹಿಸಿದರು

Leave a Reply

Your email address will not be published. Required fields are marked *

error: Content is protected !!