Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಸಾರ್ವಜನಿಕ ಅಂಗಡಿಗಳಲ್ಲಿ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕು – ನಗರಸಭೆ ಅಧ್ಯಕ್ಷ ಪ್ರಕಾಶ್

ಸರ್ಕಾರ ಆದೇಶದಂತೆ ಸಾರ್ವಜನಿಕ ಅಂಗಡಿಗಳಲ್ಲಿ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕೆಂದು ನಗರಸಭೆ ಅಧ್ಯಕ್ಷ ಪ್ರಕಾಶ್ ಹೇಳಿದರು.
ನಗರದ 25ನೇ ವಾರ್ಡಿನ ಲೇಬರ್ ಕಾಲೋನಿಯಲ್ಲಿ ಕಸ್ತೂರಿ ಕನ್ನಡ ವೇದಿಕೆ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಹಾಗೂ ಆರೋಗ್ಯ ತಪಾಸಣ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿ ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯಾಗಿದ್ದು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಅಂಗಡಿ ವ್ಯಾಪಾರ ಸ್ಥಳಗಳಲ್ಲಿ ಕಡ್ಡಾಯವಾಗಿ ಕನ್ನಡದ ನಾಮಫಲಕವನ್ನು ಹಾಕಬೇಕು ಎಂದು ಮನವಿ ಮಾಡಿದರು.
ನನ್ನ ಅಧ್ಯಕ್ಷ ಅವಧಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಂತಸ ತಂದಿದೆ ಎಲ್ಲರೂ ಈ ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸೋಣ ನಗರದ ಬಸ್ ನಿಲ್ದಾಣದಿಂದ ಸಮ್ಮೇಳನದ ಜಾಗಕ್ಕೆ ಉಚಿತವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದು ಸಮ್ಮೇಳನಕ್ಕೆ ಭಾಗವಹಿಸುವ ಜನರಿಗೆ ಭೋಜನದ ವ್ಯವಸ್ಥೆಯು ಕೂಡ ಆಯೋಜಿಸಿದೆ. ಬಂದಂತಹ ಎಲ್ಲ ಜನರಿಗೂ ಮೂಲಭೂತ ಸೌಕರ್ಯ ಕೊರತೆ ಆಗದಂತೆ ಸಮಿತಿ ವತಿಯಿಂದ ನಿರ್ವಹಣೆ ಮಾಡುತ್ತಿದೆ ಎಲ್ಲರೂ ಡಿಸಂಬರ್
20 21 22 ರಂದು ನಡೆಯುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವಂತೆ ಮನವಿ ಮಾಡಿದರು.

25ನೇ ವಾರ್ಡಿನ ನಗರಸಭಾ ಸುದರ್ಶನ್ ನಾಗೇಶ್ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕಸ್ತೂರಿ ಕನ್ನಡ ಸಂಘದ ವತಿಯಿಂದ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ವರ್ಷವೂ ಕೂಡ ರಾಜ್ಯಸಭಾ ಆಚರಣೆಯ ದಿನ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳುತ್ತಿದ್ದೇವೆ. ಲೇಬರ್ ಕಾಲೋನಿ ಬಡಾವಣೆಯ ಸುತ್ತಮುತ್ತ ಬಡ ಕಾರ್ಮಿಕರ ಹೆಚ್ಚಾಗಿದ್ದು ಅವರಿಗೆ ಅನುಕೂಲವಾಗಲಿ ಎಂದು ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳುತ್ತಿದ್ದೇವೆ. ಕಳೆದ ಬಾರಿ 20ಕ್ಕೂ ಹೆಚ್ಚು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿಕೊಡಲಾಗಿತ್ತು ಎಂದರು.

ಇದೇ ಸಂದರ್ಭದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಧಕರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪತ್ರಕರ್ತ ಗುರುಬಸವಯ್ಯ,ನಿವೃತ್ತ ಮುಖ್ಯ ಶಿಕ್ಷಕ ಬಸವರಾಜು, ಮುಖಂಡರಾದ ಶಿವಲಿಂಗಯ್ಯ ರಾಮಚಂದ್ರು ರುದ್ರಪ್ಪ ಗೊರವಾಲೆ ಚಂದ್ರಶೇಖರ್ ಸೊಸೈಟಿ ಚಂದ್ರು ಈರಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!