
ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿಯ ಕಾವೇರಿ ನದಿಯಲ್ಲಿ ಕೃಷಿ ವಿಜ್ಞಾನಿ, ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರ ಶವವು ಪತ್ತೆಯಾಗಿದೆ. ಮೈಸೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದ ಡಾ.ಸುಬ್ಬಣ್ಣ ಅಯ್ಯಪ್ಪನ್ ಮೇ 07 ರಂದು ಮನೆಯಿಂದ ನಾಪತ್ತೆಯಾಗಿದ್ದರು.ಕುಟುಂಬಸ್ಥರು ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ನದಿಯಲ್ಲಿ ಅಪರಿಚಿತ ಶವ ತೇಲುತ್ತಿರುವವರಿಗೆ ಬಗ್ಗೆ ಪೊಲೀಸರಿಗೆ ಸಾರ್ವಜನಿಕರಿಂದ ಮಾಹಿತಿ ದೊರೆತಿದೆ. ಸ್ಥಳಕ್ಕೆ ಬಂದು ಶವವನ್ನು ಮೇಲೆ ತೆಗೆದು ನೋಡಿದಾಗ ವಿಜ್ಞಾನಿಯ ಗುರುತು ಪತ್ತೆ ಆಗಿದ್ದು, ನದಿ ದಡದಲ್ಲಿ ವಿಜ್ಞಾನಿ ಅಯ್ಯಪ್ಪನ್ ಅವರ ಸ್ಕೂಟರ್ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಡಾ.ಸುಬ್ಬಣ್ಣ ಅಯ್ಯಪ್ಪನ್ ಮನೆಯಿಂದ ಹೊರಗೆ ಹೋದರವರು ವಾಪಸ್ಸ್ ಆಗಿರಲಿಲ್ಲ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Leave a Reply