
ಮಂಡ್ಯ ತಾಲೂಕಿನ ಕೀಲಾರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಎಂ. ರಾಜು ಹಾಗೂ ಉಪಾಧ್ಯಕ್ಷರಾಗಿ ಕೆ.ಸಿ. ಧರ್ಮೇಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಕೆ.ಎಂ. ರಾಜು ಹಾಗೂ ಉಪಾಧ್ಯಕ್ಷರಾಗಿ ಕೆ.ಸಿ. ಧರ್ಮೇಂದ್ರ ಅವರನ್ನೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಇವರ ಆಯ್ಕೆಯನ್ನು ಘೋಷಿಸಿದರು.
ನೂತನ ಅಧ್ಯಕ್ಷ ಕೆ.ಎಂ. ರಾಜು ಮಾತನಾಡಿ, ಗ್ರಾಮದ ಮುಖಂಡರು, ನಿರ್ದೇಶಕರು ನನ್ನನ್ನು ಮತ್ತು ಉಪಾಧ್ಯಕ್ಷರನ್ನು ಒಮ್ಮತದಿಂದ ಆಯ್ಕೆ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳನ್ನು ಹೇಳುತ್ತೇನೆ ಎಂದರು.
ಮುಂದಿನ ದಿನಗಳಲ್ಲಿ ಸಂಘದ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರಲ್ಲದೆ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಅದೇ ರೀತಿ ಸಂಘಕ್ಕೆ ಸೇರಿದ ಅಪೂರ್ಣಗೊಂಡಿರುವ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಅರ್ಪಿಸುವುದಾಗಿ ತಿಳಿಸಿದರು.
ಇದೇ ವೇಳೆ ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯ್ ಆನಂದ್ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು. ಉಪಾಧ್ಯಕ್ಷ ಧರ್ಮೇಂದ್ರ, ನಿರ್ದೇಶಕರುಗಳಾದ ಗೌರೀಶ್, ವೀರೇಶ್, ನಿತ್ಯಾನಂದ, ಮಲ್ಲೇಶ್ ಕೆ.ಬಿ., ಚಿಕ್ಕಚನ್ನಯ್ಯ, ಗ್ರಾ.ಪಂ. ಅಧ್ಯಕ್ಷ ಶಿವಾನಂದ, ಮುಖಂಡರಾದ ಶಂಕರ್, ರಘು ಸೇರಿದಂತೆ ಹಲವರು ಇದ್ದರು.

Leave a Reply