Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಕರ್ನಾಟಕ ವಸತಿ ಶಾಲೆಗಳಲ್ಲಿ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು (KREIS) 2026-27ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ, ಅಂಬೇಡ್ಕರ್, ವಸತಿ ಶಾಲೆಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಯಲಿದೆ

ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು,

ಇದಕ್ಕೆ ಆನ್‌ಲೈನ್ ಘೋಷಣಾ ಪತ್ರವನ್ನು ಡೌನ್‌ಲೋಡ್ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಜನವರಿ 25, 2026ರೊಳಗೆ ಹತ್ತಿರದ ವಸತಿ ಶಾಲೆಗೆ ಸಲ್ಲಿಸಬೇಕು,
ಪ್ರವೇಶ ಪರೀಕ್ಷೆಯು ಮಾರ್ಚ್ 1, 2026ರಂದು ನಡೆಯಲಿದೆ
ಎಂದು ಹುಳಿಗೆರೆ ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲ ಮೋಹನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!