
ಅಪಘಾತ ಯಲ್ಲಿ ಮಕ್ಕಳು ಸೇರಿದಂತೆ ಕೈ, ಕಾಲು ಮುರಿತವಾಗಿದ್ದು, 5 ಜನರ ಸ್ಥಿತಿ ಚಿಂತಾಜನಕವಾಗಿದೆ.
ಅಲನಹಳ್ಳಿ ಗ್ರಾಮದಿಂದ ಕೆ ಆರ್ ಪೇಟೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು.
ಬಸ್ನಲ್ಲಿ ಸುಮಾರು 25ಕ್ಕೂ ಹೆಚ್ಚು ಜನ ಮತ್ತು ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ತಕ್ಷಣವೇ ಕೆಆರ್ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply