Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಲೋಕಾಯುಕ್ತ ಬಲೆಗೆ ಬಿದ್ದ ತಗ್ಗಹಳ್ಳಿ ಗ್ರಾ.ಪಂ ಸದಸ್ಯ

ಮಂಡ್ಯ:  ಕಾಮಗಾರಿಗೆ ಸಂಬಂಧಿಸಿದಂತೆ ಬಿಲ್ ಹಣ ಬಿಡುಗಡೆ ಮಾಡಿಸಲು‌ ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಸೋಮವಾರ ರಾತ್ರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಪಂ ಸದಸ್ಯ ಕೆ.ಆರ್.ಅನಿಲ್‌ಕುಮಾರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಕಾಮಗಾರಿ ಮಾಡಿದ ಬಿಲ್ ಹಣ ಬಿಡುಗಡೆ ಮಾಡಿಸಲು‌ 50 ಸಾವಿರ ರೂ ಲಂಚದ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕೋಲಕಾರನದೊಡ್ಡಿಯ ಚನ್ನಬಸಪ್ಪ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಸೋಮವಾರ ರಾತ್ರಿ ನಗರದ ಲೋಕಾಯುಕ್ತ ಕಚೇರಿ ಸಮೀಪದ ಹೋಟೆಲ್‌ನಲ್ಲಿ ಲಂಚ ಸ್ವೀಕರಿಸುವ ವೇಳೆ ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಸುನಿಲ್‌ಕುಮಾರ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಮೋಹನ್ ರೆಡ್ಡಿ, ಜಯರತ್ನಾ, ಸಿಬ್ಬಂದಿಗಳಾದ ಮಹಾದೇವಸ್ವಾಮಿ, ಶಂಕರ್, ಶರತ್,ದಾಳಿ ನಡೆಸಿದ್ದಾರೆ

Leave a Reply

Your email address will not be published. Required fields are marked *

error: Content is protected !!