Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಸ್ಮಶಾನ,ರಸ್ತೆ ಅಭಿವೃದ್ಧಿಗೆ ಮಾರಸಿಂಗನಹಳ್ಳಿ ಗ್ರಾಮಸ್ಥರ ಅಗ್ರಹ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಡ್ಯ ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿಯ ಮಾರಸಿಂಗನಹಳ್ಳಿ ಗ್ರಾಮದಲ್ಲಿರುವ ಸಾರ್ವಜನಿಕ ಸ್ಮಶಾನ ಅಭಿವೃದ್ಧಿಗೆ ಆಗ್ರಹಿಸಿ ಕ್ಷೇತ್ರದ ಶಾಸಕರಾದ ತಮಗೆ ಸಾಕಷ್ಟು ಬಾರಿ ಮೌಕಿಕವಾಗಿ ಮತ್ತು ಲಿಖಿತವಾಗಿ ಮನವಿ ಪತ್ರ ಸಲ್ಲಿಸಿದ್ದರೂ ಸಹ, ಶಾಸಕರಾಗಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ ಅಭಿವೃದ್ಧಿ ಮಾಡದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬಹಿರಂಗ ಪತ್ರವನ್ನು  ಸಾಮಾಜಿಕ ಮಾಧ್ಯಮಗಳ ಮೂಲಕ ಸಮರ್ಪಿಸಲಾಗುತ್ತಿದೆ ಎಂದು ಸ್ಥಳೀಯ ಶೋಷಿತ ಸಮುದಾಯಗಳ ನಿವಾಸಿಗಳು ತಿಳಿಸಿದ್ದಾರೆ.

ಅಭಿವೃದ್ಧಿ ಕಾಣದ ಸಾರ್ವಜನಿಕ ಸ್ಮಶಾನ
ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಗ್ರಾಮವಾಗಿರುವ ಮಾರಸಿಂಗನಹಳ್ಳಿ ಕುಗ್ರಾಮವಾಗಿದ್ದು, ಮಾರಸಿಂಗನಹಳ್ಳಿ ಗ್ರಾಮದಲ್ಲಿ ಸುಮಾರು 5 ಎಕರೆಗೂ ಹೆಚ್ಚು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸ್ಮಶಾನವಿದ್ದು ಸುಮಾರು ವರ್ಷಗಳಿಂದ ಪರಿಸರ ಸ್ನೇಹಿ ಸ್ಮಶಾನವಾಗಿ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿರುವುದು ಶೋಚನೀಯವಾಗಿದೆ.  ಮಂಗಲ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಯನ್ನು ಮಾಡದೆ, ಸಂಸದರ ಶಾಸಕರ ನಿಧಿಯಿಂದ ಅಭಿವೃದ್ಧಿ ಮಾಡಿಸಿಕೊಳ್ಳುವಂತೆ ಬಿಟ್ಟಿ ಸಲಹೆಯನ್ನು ನೀಡಿದ್ದಾರೆ
ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಗರ್ಭಿಣಿಯರಿಗೆ ಡೆಲಿವರಿ ಆಗೋದು ಗ್ಯಾರಂಟಿ

ಮಂಗಲ ಗ್ರಾಮದಿಂದ ಮಾರಸಿಂಗನಹಳ್ಳಿಗೆ ಸಂಪರ್ಕ ಕಲ್ಪಿಸುವ ಸುಮಾರು 4 ಕಿಲೋಮೀಟರ್ ರಸ್ತೆಯಂತೂ ಗುಂಡಿ ಬಿದ್ದು ಹಾಳಾಗಿದೆ ತುರ್ತು ಸಂದರ್ಭದಲ್ಲಿ ಗರ್ಭಿಣಿಯರನ್ನು ವಾಹನಗಳಲ್ಲಿ ಕೂರಿಸಿಕೊಂಡು ತೆರಳಿದರೆ ಡೆಲಿವರಿ ಆಗುವುದಂತೂ ಗ್ಯಾರಂಟಿ ಅಷ್ಟು ಕೆಟ್ಟದ ಮಟ್ಟಿಗೆ ರಸ್ತೆಗಳು ಹಾಳಾಗಿವೆ ಎಂದು ನೋವನ್ನು ವ್ಯಕ್ತಪಡಿಸಿದ್ದಾರೆ.

ಗ್ರಾಮದ ಅಭಿವೃದ್ಧಿಗಾಗಿ ಮತ್ತು ಪರಿಸರ ಸ್ನೇಹಿ ಸ್ಮಶಾನ ಅಭಿವೃದ್ಧಿಗಾಗಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಸಕ ರಮೇಶ್ ಬಾಬು ಬಂಡಿ ಸಿದ್ದೇಗೌಡ ತಮ್ಮ ಅನುದಾನವನ್ನು ಬಿಡುಗಡೆ ಮಾಡಿ ಅಭಿವೃದ್ಧಿ ಪಡಿಸಲು ಮುಂದಾಗಬೇಕು ಎಂಬುದು ಶೋಷಿತ ಸಮುದಾಯ ಗ್ರಾಮಸ್ಥರ ಒತ್ತಾಯವಾಗಿದೆ.

Leave a Reply

Your email address will not be published. Required fields are marked *

error: Content is protected !!