Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಶ್ರೀ ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ (ರಿ ) ವತಿಯಿಂದ ನೋಟ್ ಬುಕ್ ವಿತರಣೆ

ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶ್ರೀ ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ (ರಿ ) ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮವು ಜರುಗಿತು.
ಕಾರ್ಯಕ್ರಮವನ್ನು ಫೌಂಡೇಶನ್ ಖಜಾಂಚಿಯಾದ ಶಶಿಕುಮಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು   ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ಸಂಸ್ಥಾಪಕರಾದ ಮಹಾಲಿಂಗೇಗೌಡರ ನೇತೃತ್ವದಲ್ಲಿ 15 ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ಮಾಡುತ್ತಾ ಬಂದಿದೆ. ಅದರಂತೆ ಇಂದು ಬಸರಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ  ಶಾಲೆ ಹಾಗು ಕಾಲೇಜ್ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ಕೊಡುಗೆಯಾಗಿ ವಿತರಿಸಲಾಗುತ್ತಿದೆ. ಮಂಡ್ಯ ತಾಲೂಕಿನಾದ್ಯಂತ ಒಂದು ಲಕ್ಷ ನೋಟ್ ಬುಕ್ ಗಳನ್ನು ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ವಿತರಿಸಲು ಗುರಿ ಹೊಂದಲಾಗಿದೆ. ಸರ್ಕಾರಿ ಶಾಲೆಯ ಮಕ್ಕಳು ಉತ್ತಮವಾಗಿ ಅಭ್ಯಾಸ ಮಾಡಿ ಉನ್ನತ ಮಟ್ಟಕ್ಕೆ ಏರಬೇಕು ಎಂದರು. ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್  10 ಹಲವಾರು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದೆ.  ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಫೌಂಡೇಶನ್ ಉಪಾಧ್ಯಕ್ಷ ರವಿ ಗೌಡ, ಮುದ್ದನಗಟ್ಟ ಸದಸ್ಯರುಗಳಾದ  ಕೃಷ್ಣೇಗೌಡ,ಜೆ ಮಹೇಶ್, ಶ್ರೀನಿವಾಸ,ಮಹೇಶ ಮುಖ್ಯೋಪಾಧ್ಯಾಯರಾದ ಮೋಹನ್, ಪ್ರಾಂಶುಪಾಲರಾದ ಚಂದ್ರಶೇಖರ್ ಸೇರಿದಂತೆ ಹಲವರಿದ್ದರು

Leave a Reply

Your email address will not be published. Required fields are marked *

error: Content is protected !!