
ಕರ್ನಾಟಕ ಲೋಕಾಯುಕ್ತ ಮಂಡ್ಯ ಘಟಕದ ಪೋಲೀಸ್ ಅಧಿಕಾರಿಗಳ ಉಸ್ತುವಾರಿಯಲ್ಲಿ ಏಪ್ರಿಲ್ 08 ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಮಂಡ್ಯ ತಾಲ್ಲೂಕು ಕಚೇರಿಯಲ್ಲಿ ಮಂಡ್ಯ ತಾಲ್ಲೂಕಿಗೆ ಸಂಬಂಧಿಸಿದಂತೆ ಸಾರ್ವಜನಿಕ ದೂರು ಅರ್ಜಿ ಹಾಗೂ ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುತ್ತದೆ.
ಅಹವಾಲುಗಳ ಸ್ವೀಕಾರ ಕಾರ್ಯಕ್ರಮದ ಮಾಹಿತಿಯನ್ನು ಮಂಡ್ಯ ತಾಲ್ಲೂಕಿನ ಎಲ್ಲಾ ಸರ್ಕಾರಿ ಕಛೇರಿಗಳ ನೋಟೀಸ್ ಬೋರ್ಡ್ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಈ ಬಗ್ಗೆ ಅಧಿಕೃತ ಪ್ರಕಟಣೆ ಅಳವಡಿಸುವಂತೆ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಕಛೇರಿಗಳ ಅಧಿಕಾರಿಗಳು, ವಿಷಯ ನಿರ್ವಾಹಕರು ಸದರಿ ದಿನದಂದು ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು ಅಗತ್ಯವಿದ್ದಲ್ಲಿ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಕಾರ್ಯಕ್ರಮದ ಮಾಹಿತಿಯನ್ನು ತಮ್ಮ ಕಛೇರಿಯ ನೋಟೀಸ್ ಬೋರ್ಡ್ನಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲು ಹಾಗೂ ಏಪ್ರಿಲ್ 08 ರಂದು ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು ಸಭೆಗೆ ಹಾಜರಾಗಲು ಕ್ರಮವಹಿಸುವಂತೆ ಮಂಡ್ಯ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಮಂಡ್ಯ ತಾಲ್ಲೂಕು ತಹಶೀಲ್ದಾರರು ಕೋರಿದ್ದಾರೆ.

Leave a Reply