Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ವಾಹನ ತಪಾಸಣೆ ವೇಳೆ ಬೈಕ್ ನಿಂದ ಕೆಳಗೆ ಬಿದ್ದ ಮಗು ಸಾವು

ಹೆಲ್ಮೆಟ್ ತಪಾಸಣೆಯ ವೇಳೆ ಪೊಲೀಸರು ಬೈಕನ್ನು ಅಡ್ಡಕಟ್ಟುತ್ತಿದ್ದಂತೆಯೇ ಬೈಕ್ ಸವಾರ ಆಯ ತಪ್ಪಿ ಕೆಳಗೆ ಬಿದ್ದ ಪರಿಣಾಮ ಮಗುವೊಂದು ತಲೆಗೆ ತಿರ್ವ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರದ ಬಳಿ ನಡೆದಿದೆ.
ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ವಾಣಿ-ಅಶೋಕ್ ದಂಪತಿಯ ಮೂರುವರೆ ವರ್ಷದ ಮಗು ಹೃತೀಕ್ಷಳಿಗೆ ನಾಯಿ ಕಡಿದೆ ಎಂದು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಆಯತಪ್ಪಿ ಬೈಕ್ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಮಂಡ್ಯದ ಸ್ವರ್ಣ ಸಂದ್ರ ಬಳಿ ಹೆಲ್ಮೆಟ್ ತಪಾಸಣೆಗಾಗಿ ಸಂಚಾರಿ ಪೊಲೀಸರು ಬೈಕ್ ನಲ್ಲಿ ಬರುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಬೈಕ್ ಸವಾರ ಆಯತಪ್ಪಿ ಕೆಳಗೆ ಬೀದ್ದಿದ್ದಾನೆ. ಬೈಕ್ ನಲ್ಲಿದ್ದ ಆತನ ಪತ್ನಿ ಹಾಗೂ ಮಗು ಕೂಡ ಕೆಳಗೆ ಬಿದ್ದಿದ್ದು, ಮಗುವಿನ ತಲೆ ನೆಲಕ್ಕೆ ಅಪ್ಪಳಿಸಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎನ್ನಲಾಗಿದೆ.
ಘಟನೆಯನ್ನು ಖಂಡಿಸಿ ಮಗುವಿನ ಪೋಷಕರು ಮತ್ತು ಸಾರ್ವಜನಿಕರು ಮಂಡ್ಯ ಜಿಲ್ಲಾ ಆಸ್ಪತ್ರೆಯ ಮುಂಭಾಗದ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!