
ಮಂಡ್ಯ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ನಿರ್ಲಕ್ಷತನದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಸಿಇಓಗೆ ಹುಲಿವಾನ ಗ್ರಾ.ಪಂ. ಮಾಜಿ ಅಧ್ಯಕ್ಷರು ದೂರು ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿ ಕಚೇರಿಗೆ ತೆರಳಿದ ಹುಲಿವಾನ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಾಮರಾಜು ಅವರು, ಸಿಇಓಗೆ ದೂರು ಸಲ್ಲಿಸಿ ತಾಪಂ ಇಓ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.
ತಾಲೂಕಿನ ಹುಲಿವಾನ ಗ್ರಾಮ ಪಂಚಾಯಿತಿಯಲ್ಲಿ 2020-21 ಹಾಗೂ 2021-22 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಆದೇಶದಂತೆ ನಿಗಧಿತ ಅವಧಿಯಲ್ಲಿ ನಡೆಸದೆ ನಿರ್ಲಕ್ಷವಹಿಸಿದ್ದಾರೆ. ಈ ಬಗ್ಗೆ ತಾ.ಪಂ. ಇಒರವರನ್ನು ಭೇಟಿ ಮಾಡಿ ಎರಡು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.ನೀಡಿರುವ ದೂರಿನ ಬಗ್ಗೆ ಕ್ರಮ ಕೈಗೊಂಡು ದೂರುದಾರರಿಗೆ ಸಮರ್ಪಕ ಮಾಹಿತಿ ನೀಡದೆ ನಿರ್ಲಕ್ಷ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾ.ಪಂ. ಕಾರ್ಯ ನಿರ್ವಾಹಕ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಿರುವುದಾಗಿ ಚಾಮರಾಜು ತಿಳಿಸಿದರು.
ಪ್ರತಿ ವರ್ಷ ಆ. 15 ರಿಂದ ಸೆ. 15 ರೊಳಗೆ ಎಲ್ಲ ಗ್ರಾಮ ಪಂಚಾಯಿತಿಗಳು ಜಮಾಬಂದಿ ಕಾರ್ಯಕ್ರಮ ನಡೆಸಬೇಕು. ಹುಲಿವಾನ ಗ್ರಾಮ ಪಂಚಾಯಿತಿಯಲ್ಲಿ ಎರಡು ವರ್ಷ ಜಮಾ ಬಂದಿ ಕಾರ್ಯಕ್ರಮವನ್ನೇ ಮಾಡಿಲ್ಲ. ( ಒಂದೇ ಬಾರಿ ಮೂರು ವರ್ಷದ ಜಮಾ ಬಂದಿ ಕಾರ್ಯಕ್ರಮವನ್ನು ಮಾಡಲಾಗಿದೆ ) ತಾ.ಪಂ ಕಾರ್ಯನಿರ್ವಹಕ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಜಮಾ ಬಂದಿ ಕಾರ್ಯಕ್ರಮ ನಡೆಯುವಂತೆ ನೋಡಿಕೊಳ್ಳುವುದು ಅವರ ಕರ್ತವ್ಯವಾಗಿರುತ್ತದೆ. ಜಮಾ ಬಂದಿ ಕಾರ್ಯಕ್ರಮ ನಡೆಸದ ಬಗ್ಗೆ ದೂರು ನೀಡಿ ಒಂದು ವರ್ಷವಾದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Leave a Reply