
ಅಸ್ತಿಗಾಗಿ ಜಗಳ ನಡೆದು ಅಣ್ಣನೊಬ್ಬ ತಮ್ಮನನ್ನೇ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಡ್ಯ ತಾಲ್ಲೂಕಿನ ಮಾಯಪ್ಪನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಯೋಗೇಶ್ (35) ಎಂಬಾತನೇ ಕೊಲೆಯಾಗಿದ್ದು, ಅಣ್ಣ ಲಿಂಗರಾಜು , ಹೆಂಡತಿ, ಮಕ್ಕಳು ಸೇರಿಕೊಂಡು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಾಜ್ಯವು ಕೋರ್ಟಿನಲ್ಲಿತ್ತು. ಕೊಲೆಯಾದ ಯೋಗೇಶನಿಗೆ ಜ. 21 ರಂದು ಮದುವೆ ನಿಶ್ಚಯವಾಗಿತ್ತು.
ಸ್ಥಳಕ್ಕೆ ಮಂಡ್ಯ ಜಿಲ್ಲಾ ಎಸ್ ಪಿ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply