
ಮಂಡ್ಯ : ಮಂಡ್ಯ ವೈದ್ಯಕೀಯ ಕಾಲೇಜು ಪಕ್ಕದಲ್ಲಿರುವ ತಮಿಳು ಕಾಲೋನಿ ಹಾಗೂ ಬಲಾಢ್ಯರು ಒತ್ತುವರಿ ಮಾಡಿಕೊಂಡಿರುವ ಜಾಗಕ್ಕೆ ಉಪ ವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಜುಲೈ 1 ರಂದು ಮಂಡ್ಯ ಮೆಡಿಕಲ್ ಕಾಲೇಜಿಗೆ ಸೇರಿದ 18 ಎಕರೆ ಭೂಮಿ ಒತ್ತುವರಿ ಮಾಡಿಕೊಂಡಿರುವ ತಮಿಳು ಕಾಲೋನಿ ಸೇರಿದಂತೆ ಸಂಪೂರ್ಣ ಒತ್ತುವರಿ ತೆರವುಗೊಳಿಸಲು ಕನ್ನಡಿಗರ ಜಾಗೃತಿ ಜಾಥ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮತ್ತಷ್ಟು ಒತ್ತುವರಿ ತೆರವುಗೊಳಿಸುವ ಸಂಬಂಧ ಕಂದಾಯ ಇಲಾಖೆ ಮುಂದಾಗಿದ್ದು, ಅದರ ಭಾಗವಾಗಿ ಇಂದು ಉಪ ವಿಭಾಗಾಧಿಕಾರಿ ಶಿವಮೂರ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಯಸುವ ನಾಡಿನ ಕನ್ನಡಪರ ಮನಸುಗಳು ಈ ಹೋರಾಟಕ್ಕೆ ಕೈ ಜೋಡಿಸಿದ್ದ ಪರಿಣಾಮ ಇಂದು ಮಂಡ್ಯ ಉಪವಿಭಾಗಧಿಕಾರಿಗಳ ನೇತೃತ್ವದಲ್ಲಿ ಭೂದಾಖಲೆಗಳ ಸಹಾಯಕರು ನಗರಸಭೆ ಆಯುಕ್ತರು ಮಿಮ್ಸ್ ನಿರ್ದೇಶಕರು ಸೇರಿದಂತೆ ಹಲವು ಅಧಿಕಾರಿಗಳು ಜಾಗವನ್ನು ಒಂದು ಸುತ್ತು ಸುತ್ತುಹಾಕುವ ಮೂಲಕ ಸ್ಥಳ ಸಮೀಕ್ಷೆ ನಡೆಸಿದರು. ಸುಮಾರು 18 ಎಕರೆ ಜಮೀನು ಒತ್ತುವರಿಯಾಗಿದ್ದು, ಸುಮಾರು ಎರಡು ನೂರು ಕೋಟಿಗೂ ಹೆಚ್ಚಿನ ವೌಲ್ಯವುಳ್ಳದ್ದಾಗಿದೆ ಎಂದು ಅಂದಾಜಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರಗತಿಪರ ಸಂಘಟನೆಗಳು ಮತ್ತು ಹೋರಾಟಗಾರರು ಈ ಜಾಗದ ಉಳಿವಿಗಾಗಿ ಕಾನೂನು ಹೋರಾಟ ಮಾಡಿದ್ದರು. ಅದರ ಫಲವಾಗಿ ತಮಿಳುಕಾಲೋನಿ ಸ್ಥಳಾಂತರಕ್ಕೆ ಈಗಾಗಲೇ ಚಿಕ್ಕಮಂಡ್ಯ ಸಮೀಪ 576 ಮನೆಗಳನ್ನು ನಿರ್ಮಿಸಲಾಗಿದೆ. ಶೀಘ್ರ ನಿವಾಸಿಗಳನ್ನು ಸ್ಥಳಾಂತರ ಮಾಡುವ ಸಾಧ್ಯತೆಗಳಿವೆ.
ಶೀಘ್ರ ತಮಿಳುನಿವಾಸಿಗಳನ್ನು ಸ್ಥಳಾಂತರ ಮಾಡುವುದರ ಜೊತೆಗೆ ಬಲಾಢ್ಯರು ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸಿ ಸಂಪೂರ್ಣ ಜಮೀನನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಬೇಕು. ಆ ಮೂಲಕ ಕಾಲೇಜಿನ ಅಭಿವೃದ್ಧಿ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿ ಇತರೆ ಅತ್ಯಾಧುನಿಕ ಸೌಲಭ್ಯಗಳು ಜಿಲ್ಲೆಯ ಜನರಿಗೆ ದೊರೆಯುವಂತೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣದ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಮ ಒತ್ತಾಯಿಸಿದ್ದಾಈ ಸಂದರ್ಭದಲ್ಲಿ ನಗರಸಭೆ, ಮಿಮ್ಸ್ ಆಸ್ಪತ್ರೆಯ ನಿರ್ದೇಶಕರು ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.ರೆ.

Leave a Reply