
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಇ-ಸ್ವತ್ತು ಮಾಡಿಕೊಡಲು 20,000 ರೂ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಮುರುಕನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಒ ಸೈಯದ್ ಮುಜಾಕೀರ್ ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಮುರುಕನಹಳ್ಳಿ ಪಿಡಿಒ ಸೈಯದ್ ಮುಜಾಕೀರ್ ವಿರುದ್ಧ ವ್ಯಕ್ತಿಯೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಒಟ್ಟು 50,000 ರೂ. ಬೇಡಿಕೆ ಇಟ್ಟಿದ್ದ ಹಣದಲ್ಲಿ 20,000 ರೂ. ನ್ನು ಮುಂಗಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯನಗೌಡ ನೇತೃತ್ವದಲ್ಲಿ ದಾಳಿಯನ್ನು ನಡೆಸಿದ ಲೋಕಾಯುಕ್ತ ಪಿಡಿಒ ವಶಕ್ಕೆ ಪಡೆದು, ವಿಚಾರಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply