
ಮಂಡ್ಯ ಜಿಲ್ಲೆಯ 233 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಉದ್ಯೋಗ ಚೀಟಿಯ ಎಲ್ಲಾ ಸದಸ್ಯರು ಆಕ್ಟೋಬರ್ 31 ರ ಒಳಗಾಗಿ ಇ-ಕೆವೈಸಿ ಹೊಂದುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್ ರವರು ತಿಳಿಸಿದ್ದಾರೆ.
E- KYC ಯು ಎಲೆಕ್ಟ್ರಾನಿಕ್ ನೊವ್ ಯುವರ್ ಕಸ್ಟಮರ್ (Electronic Know Your Customer) ಆಗಿದೆ. ಇದು ಕೂಲಿಕಾರರ ಗುರುತು ಮತ್ತು ವಿಳಾಸವನ್ನು ಆಧಾರ್ ದೃಢೀಕರಣದಂತಹ ಡಿಜಿಟಲ್ ವಿಧಾನಗಳ ಮೂಲಕ ಪರಿಶೀಲಿಸುವ ಒಂದು ಆನ್ಲೈನ್ ಪ್ರಕ್ರಿಯೆಯಾಗಿದೆ.
ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶದಂತೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪತ್ರ ಹಾಗೂ ವಿಡಿಯೋ ಸಂವಾದದ ಆದೇಶದ ಮೇರೆಗೆ ಮಹಾತ್ಮ ಗಾಂಧಿ ಯೋಜನೆಯಡಿ ಅನುಷ್ಠಾನಿಸುವ ಕಾಮಗಾರಿಗಳಲ್ಲಿ ಭಾಗವಹಿಸುವ ಕೂಲಿಕಾರರ ಹಾಜರಾತಿಯನ್ನು ಎನ್.ಎಮ್.ಎಮ್.ಎಸ್ ಆಪ್ ನಲ್ಲಿ ಸೆರೆ ಹಿಡಿಯಲಾಗುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು ಪ್ರಾಯೋಗಿಕವಾಗಿ NMMS – E- ಕೆಯ್ಕ್ ನ್ನು ಸಕ್ರಿಯ ಕೂಲಿಕಾರರ ಮಾಹಿತಿಯನ್ನು ಅಪ್ಡೇಟ್ ಮಾಡಲು ಸೂಚಿಸಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಆರಂಭಗೊಳಿಸಲಾಗಿತ್ತು. ಇದರ ಯಶಸ್ವಿ ನಂತರ ಇತರೆ ಜಿಲ್ಲೆಗಳಿಗೂ ವಿಸ್ತರಿಸಲು ವಿಡಿಯೋ ಸಂವಾದದಲ್ಲಿ ತಿಳಿಸಲಾಗಿದೆ. ಅದರಂತೆ ಅಕ್ಟೋಬರ್ 31, 2025 ರೊಳಗೆ ಪೂರ್ಣಗೊಳಿಸಲು ಈ ಕೆಳಕಂಡ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪತ್ರದಲ್ಲಿ ತಿಳಿಸಿರುತ್ತಾರೆ.
ಮಂಡ್ಯ ಜಿಲ್ಲೆಯಲ್ಲಿ ಮ-ನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರಲ್ಲಿ ಸಕ್ರಿಯ ಕೂಲಿಕಾರರ ಮಾಹಿತಿಯನ್ನು NMMS E-KYC ಆಪ್ ನಲ್ಲಿ ಅಪ್ಲೋಡ್ ಮಾಡುವ ಬಗ್ಗೆ ಗ್ರಾಮ ಪಂಚಾಯಿತಿ/ಗ್ರಾಮ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಲು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ರವರಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.
ಈ NMMS E-KYC ಅಪ್ಡೇಟ್ ಪ್ರಕ್ರಿಯೆಯನ್ನು ಅಕ್ಟೋಬರ್ ಮಾಹೆಯೊಳಗೆ ಪೂರ್ಣಗೊಳಿಸಲು ಗ್ರಾಮ ಪಂಚಾಯಿತಿಗಳಿಗೆ ವೇಳಾಪಟ್ಟಿಯನ್ನು ನಿಗದಿಪಡಿಸಿ, ಅಗತ್ಯ ಅಧಿಕಾರಿ/ಸಿಬ್ಬಂದಿಗಳಿಂದ ಅಪ್ಡೇಟ್ ಮಾಡಿಸಲು ಕ್ರಮವಹಿಸುವಂತೆ ತಿಳಿಸಲಾಗಿದೆ.
NMMS E-KYC ಅಪ್ಡೇಟ್ ಮಾಡಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ತಾಲ್ಲೂಕು ಮಟ್ಟದಲ್ಲಿ ವಿಡಿಯೋ ಮೂಲಕ ತರಬೇತಿ ನೀಡಲಾಗಿದೆ.
NMMS E-KYC ಅಪ್ಡೇಟ್ ಅನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸುವ ಸಲುವಾಗಿ ಕಾಲಕಾಲಕ್ಕೆ ಕ್ರಮವಹಿಸಲು ತಾಲ್ಲೂಕು ಮಟ್ಟದಲ್ಲಿ ಸಹಾಯಕ ನಿರ್ದೇಶಕರು(ಗ್ರಾಮೀಣ ಉದ್ಯೋಗ) ರವರನ್ನು ಉಸ್ತುವಾರಿ ಅಧಿಕಾರಿಯಾಗಿ ನೇಮಿಸಲಾಗಿದೆ.
ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕು,ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು, ಬಿ ಎಫ್ ಟಿ ಗಳು, ಗ್ರಾಮ ಕಾಯಕ ಮಿತ್ರಗಳಿಗೆ ತರಬೇತಿ ನೀಡುವ ಮೂಲಕ ಈ ಪ್ರಕ್ರಿಯೆ ಪ್ರಾರಂಭಗೊಂಡಿದೆ.
ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಪ್ರತಿಯೊಬ್ಬರ ಎಣಿಕೆ ಮೂಲಕ ಎನ್ ಎಂ ಎಂ ಎಸ್ ಹಾಜರಾತಿ ಸಂಖ್ಯೆ ಆನೈನ್ ತೆಗೆದುಕೊಳ್ಳುತ್ತಿದ್ದು, ಇ-ಕೆವೈಸಿ ಹೊಂದುವ ಕೂಲಿಕಾರರ ಹಾಜರಾತಿ ತೆಗೆದುಕೊಳ್ಳುವಾಗ ಅವರ ಆಧಾರ್ ನಂಬರ್ ಮತ್ತು ಸ್ಥಳದಲ್ಲಿ ಹಾಜರಿದ್ದವರ ಮುಖ ಹೊಂದಾಣಿಕಯಾಗಿದ್ದಲ್ಲಿ ಮಾತ್ರ ಅವರನ್ನು ಎನ್ ಎಂ ಎಂ ಎಸ್ ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸದೇ ಇರುವಂತಹ ಕೂಲಿಕಾರರು ನವೆಂಬರ್ 1 ರಿಂದ NMMS ನಲ್ಲಿ ಹಾಜರಾತಿಯನ್ನು ಆನ್ ಲೈನ್ ನಲ್ಲಿ ತೆಗೆದುಕೊಳ್ಳುವುದಿಲ್ಲ, ಮಂಡ್ಯ ಜಿಲ್ಲೆಯಲ್ಲಿ ಒಟ್ಟು 200697 ಸಕ್ರಿಯ ಕೂಲಿಕಾರರಿದ್ದು, ತುರ್ತಾಗಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಪ್ರತಿಯೊಬ್ಬ ಸಕ್ರಿಯ ನರೇಗಾ ಕೂಲಿಕಾರರು ಆಧಾರ ಕಾರ್ಡ ಹಾಗೂ ಜಾಬ್ ಕಾರ್ಡನೊಂದಿಗೆ ನಿಮ್ಮ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಕೆವೈಸಿ ಹೊಂದಬೇಕು ಎಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply