
ಮಂಡ್ಯ ತಾಲೂಕಿನ ಪಿಎಲ್‌ಡಿ ಬ್ಯಾಂಕ್‌ಗೆ ಜ. 25 ರಂದು ನಡೆಯುತ್ತಿರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ತಗ್ಗಹಳ್ಳಿ ಮೂರನೇ ಕ್ಷೇತ್ರದಿಂದ ತಗ್ಗಹಳ್ಳಿ ಗ್ರಾಮದ ಟಿ. ಬಿ ಶಿವಲಿಂಗೇಗೌಡ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬುಧವಾರ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾಗಿ ಮೂರು ಬಾರಿ ಸೇವೆ ಸಲ್ಲಿಸಿದ್ದೆನೆ. ರೈತರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ತಗ್ಗಳ್ಳಿ ಮೂರನೇ ಕ್ಷೇತ್ರದಿಂದ ಬೆಂಬಲಿಗರ ಒತ್ತಾಯದ ಮೇರೆಗೆ ನಾಲ್ಕನೇ ಬಾರಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು.
ರೈತರಿಗೆ ಒಳ್ಳೆಯದನ್ನು ಮಾಡಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಅತಿ ಹೆಚ್ಚು ಮತವನ್ನು ಹಾಕುವುದರ ಮೂಲಕ ತಮ್ಮನ್ನು ಗೆಲ್ಲಿಸಬೇಕು ಎಂದು ಅವರು ಮತದಾರರಲ್ಲಿ ಮನವಿ ಮಾಡಿದರು.
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರುಗಳಾದ ಮಾಯಿಗಣ್ಣ, ಸಂಜು, ರಾಮಚಂದ್ರು, ಸಂತೆ ಕಶಲಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜು, ಮುಖಂಡರಾದ ಪ್ರಸನ್ನ, ಮಾದೇಗೌಡ, ಸಿದ್ದೇಗೌಡ, ನಿಂಗರಾಜು, ಬೇವಿನಹಳ್ಳಿ ಮಹೇಶ್ ಸೇರಿದಂತೆ ಹಲವರಿದ್ದರು.

Leave a Reply