Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಸಹಕಾರ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ – ಬೇಲೂರು ಸೋಮಶೇಖರ್

ಮಂಡ್ಯ ಜಿಲ್ಲಾಡಳಿತವು ಸಹಕಾರ ಕ್ಷೇತ್ರದಿಂದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಬೇಲೂರು ಸೋಮಶೇಖರ್ ಸಂತಸ ವ್ಯಕ್ತಪಡಿಸಿದರು.

ನಮ್ಮ ಜನರ ಧ್ವನಿ. ಕಾಂ ಜೊತೆ ಮಾತನಾಡಿದ ಬೇಲೂರು ಸೋಮಶೇಖರ್ ರವರು ನಾನು ಕಳೆದ 25 ವರ್ಷಗಳಿಂದ ಶಿಕ್ಷಣ ಸಹಕಾರ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದೇನೆ. ನನ್ನ ಸೇವೆಯನ್ನು ಗುರುತಿಸಿರುವ ಮಂಡ್ಯ ಜಿಲ್ಲಾಡಳಿತವು ನನಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿರುವುದು ನನಗೆ ಸಂತೋಷ ತರುವುದರ ಜೊತೆಗೆ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ . ಮುಂದಿನ ದಿನಗಳಲ್ಲಿ ನನ್ನ ಸೇವೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಸಮಾಜಕ್ಕೆ ನೀಡುತ್ತೇನೆ. ಪ್ರಶಸ್ತಿಗೆ ಆಯ್ಕೆ ಮಾಡಿದ ಜಿಲ್ಲಾಡಳಿತಕ್ಕೆ ಮತ್ತೊಮ್ಮೆ ಧನ್ಯವಾದಗಳನ್ನು ಹೇಳುತ್ತೇನೆ ಎಂದರು.

Leave a Reply

Your email address will not be published. Required fields are marked *

error: Content is protected !!