Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಅಧಿಕಾರಿಗಳ ವರ್ಗಾವಣೆ / ನಿಯೋಜನೆಯನ್ನು ರದ್ದುಗೊಳಿಸಿ : ಎಂ. ಚಾಮರಾಜು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ಅಥವಾ ನಿಯೋಜನೆಯನ್ನು ಮಾಡಲು ಸರ್ಕಾರದ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಲಾಗಿರುತ್ತದೆ.  ಆದರೆ  ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳನ್ನು ಸರ್ಕಾರದ ನಿಯಮ ಮೀರಿ ಸರ್ಕಾರದ ಅನುಮೋದನೆ ಇಲ್ಲದೆ ಮೂಲಸ್ಥಾನದಿಂದ ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆ/ವರ್ಗಾವಣೆ ಮಾಡಲಾಗಿರುತ್ತದೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಾಮರಾಜು ಅವರು ಜಿ.ಪಂ. ಉಪ ಕಾರ್ಯದರ್ಶಿ ಎಂ. ಬಾಬು ಅವರಿಗೆ ಮನವಿ ಸಲ್ಲಿಸಿದರು.

ಈ ಕೂಡಲೇ ಸರ್ಕಾರದ ಅನುಮೋದನೆ ಇಲ್ಲದೆ ಮಾಡಿರುವ ನಿಯೋಜನೆ ಅಥವಾ ವರ್ಗಾವಣೆಯನ್ನು  ರದ್ದುಗೊಳಿಸಿ ಎಲ್ಲಾ ಅಧಿಕಾರಿಗಳನ್ನು ಮೂಲ ಸ್ಥಾನಕ್ಕೆ ಹಿಂದಿರುಗಿಸಿ ಕರ್ತವ್ಯ ನಿರ್ವಹಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಅರುಂಧತಿ ಅವರು ಜ. ೧೫ರಂದು ಹೊರಡಿಸಿರುವ ಆದೇಶದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯಿತಿ ಜಿಲ್ಲಾ,ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ಪಿಡಿಒ ಕಾರ್ಯದರ್ಶಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಮೂಲ ಸ್ಥಾನದಿಂದ ಬೇರೆ ಕಡೆಗೆ ವರ್ಗಾವಣೆ / ನಿಯೋಜನೆ ಮಾಡಿರುವುದನ್ನು ಸರ್ಕಾರದ ಆದೇಶದಂತೆ ರದ್ದುಪಡಿಸುವಂತೆ  ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!