
ಜಿಲ್ಲಾ ಪಂಚಾಯಿತಿ ಮಂಡ್ಯ , ತಾಲ್ಲೂಕು ಪಂಚಾಯಿತಿ ಮಂಡ್ಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಕೇಂದ್ರಗಳ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಏಪ್ರಿಲ್ 17 ರಿಂದ ಮೇ 26 ರ ವರೆಗೆ ಹಮ್ಮಿಕೊಂಡಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ 8 ರಿಂದ 13 ವರ್ಷದೊಳಗಿನ ಎಲ್ಲಾ ಮಕ್ಕಳು ಪಾಲ್ಗೊಂಡು ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಯಶಸ್ವಿಗೊಳಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಕೆ.ಆರ್ ನಂದಿನಿರವರು ತಿಳಿಸಿದರು.
ಮಂಡ್ಯ ತಾಲ್ಲೂಕು ಯಲಿಯೂರು ಗ್ರಾಮ ಪಂಚಾಯಿತಿಯ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿರುವ ಅಕ್ಕರೆಯ ಅಂಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೇಸಿಗೆ ಶಿಬಿರವನ್ನು ಆಯೋಜಿಸುವ ಮೂಲಕ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡುವುದು ಶಿಬಿರದ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬೇಸಿಗೆ ಶಿಬಿರವನ್ನು ಆಯೋಜಿಸಲಾಗುತ್ತಿದೆ.
ಓದುವ, ಬರೆಯುವ, ಅಂಕಿ ಸಂಖ್ಯೆ ವಿಜ್ಞಾನ ವಿಷಯಗಳು, ನಾಯಕತ್ವ ಮತ್ತು ಸಂವಹನ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಲಾಗಿದೆ. ಪರಿಸರ ಕಾಳಜಿ, ಸಾಮಾಜಿಕ ಕಾಳಜಿ ಬೆಳೆಸುವುದು ಮತ್ತು ಸ್ಥಳೀಯ ಸಂಸ್ಕೃತಿ ಜೀವನ ಶೈಲಿ, ಇತಿಹಾಸ ಅಂಶಗಳನ್ನು ತಿಳಿಯುವಂತೆ ಮಾಡುವುದು ಹಾಗೂ ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಬೇಸಿಗೆ ಶಿಬಿರದ ಆಶಯವಾಗಿರುತ್ತದೆ. , ಮಕ್ಕಳಲ್ಲಿ ಲವಲವಿಕೆ ಮೂಡಿಸುವ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಲಾಗಿದ್ದು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಈ ಮೂಲಕ ತಿಳಿಸಿದರು.
ನಂತರ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳೊಂದಿಗೆ ಮಾತನಾಡಿ ಬೇಸಿಗೆ ಶಿಬಿರದಿಂದ ಮಕ್ಕಳಾಗುತ್ತಿರು ಅನುಕೂಲ ಹಾಗೂ ಶಿಬಿರದಲ್ಲಿ ಯಾವ ರೀತಿಯ ಚಟುವಟಿಕೆಗಳನ್ನು ಕೈಗೊಂಡರೆ ಮಕ್ಕಳಿಗೆ ಇಷ್ಟವಾಗುತ್ತದೆ ಎಂಬ ಮಾಹಿತಿಯನ್ನು ಪಡೆದರು.ನಂತರ ಮಕ್ಕಳಿಗೆ ಪೌಷ್ಟಿಕ ಲಘು ಉಪಹಾರವನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮಿ,ಇಓ ಲೋಕೇಶ್ ಮೂರ್ತಿ,ಕ್ಷೇತ್ರಶಿಕ್ಷಣಧಿಕಾರಿ ಮಹದೇವು,ಸಹಾಯಕ ನಿರ್ದೇಶಕರಾದ ಮೇನಕಾ,ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಸನ್ನ ಸಿ.ಬಿ , ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಗ್ರಂಥಪಾಲಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Leave a Reply