
ಮದ್ದೂರು ತಾಲೂಕಿನ ಶಿವಾರಗುಡ್ಡದಲ್ಲಿರುವ ಕೇಂದ್ರೀಯ ನವೋದಯ ವಿದ್ಯಾಲಯಕ್ಕೆ ಮೋಹನ್ ಕುಮಾರ್ ಅವರನ್ನು ನಾಮನಿರ್ದೇಶನ ಮಾಡಿ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ.
ಪಾಂಡವಪುರ ತಾಲೂಕು ಹುಳಿಗೆರೆ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಮೋಹನ್ ಕುಮಾರ್ ಅವರ ಕಾರ್ಯವೈಖರಿಯನ್ನು ಗಮನಿಸಿ ಈ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಲಾಗಿದೆ.
ಮೋಹನ್ ಕುಮಾರ್ ಅವರು ದೀನದಲಿತರ, ನಿರ್ಗತಿಕರ, ಅಲೆಮಾರಿ ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗೆ ತೊಡಗಿಸಿಕೊಂಡಿರುವುದನ್ನು ಗಮನಿಸಿ ಐಎಎಸ್ ಅಧಿಕಾರಿಯಾದ ಮೇಜರ್ ಮಣಿ ಮಣ್ಣನ್ನವರು ಪ್ರಸಂಶನ ಪತ್ರ ನೀಡಿದ್ದಾರೆ. ಅಲ್ಲದೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಲವಾರು ಸಂಘ ಸಂಸ್ಥೆಗಳು ಮೋಹನ್ ಕುಮಾರ್ ಅವರ ಕಾರ್ಯ ವೈಖರಿಯನ್ನು ಗಮನಿಸಿ,ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ನೀಡಿ ಅವರನ್ನು ಗೌರವಿಸಿವೆ..

Leave a Reply