
*ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಮನೆಯಲ್ಲಿ ಚಾಲನೆ*
ಮಂಡ್ಯ: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯು ಇಂದಿನಿಂದ ಆರಂಭಗೊಂಡು ಜುಲೈ 29 ರವರೆಗೆ ನಡೆಯಲಿದೆ ಎಂದು ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ಹೇಳಿದರು.
ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗ್ರಾಮದಲ್ಲಿರುವ ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಮನೆಯಲ್ಲಿ ಆಯೋಜಿಸಿದ್ದ ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್.ಐ.ಆರ್. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನಕ್ಕೆ ನೊಂದಣಿ ಮಾಡಿಸುವ ಮೂಲಕ ಚಾಲನೆ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ (ಗಣತಿ ನಮೂನೆ) ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ, ಬಿಎಲ್ಒಗಳು ಮನೆಗೆ ತರುವ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ನೀಡಿ ನೊಂದಣಿ ಮಾಡಿಸಿಕೊಂಡು ಮತದಾನದ ಹಕ್ಕು ಉಳಿಸಿಕೊಳ್ಳುವಂತೆ ಸಲಹೆ ನೀಡಿದರು.
ಬಿಎಲ್ಓಗಳು ನಿಮ್ಮ ಮನೆಗಳಿಗೆ ಬಂದು ಅರ್ಜಿ ನೀಡಲಿದ್ದಾರೆ. 30 ದಿನಗಳ ಅವಧಿಯಲ್ಲಿ ಕಡ್ಡಾಯವಾಗಿ ಈ ಎನ್ಯುಮರೇಷನ್ ಅರ್ಜಿ ತುಂಬಿ ಅಗತ್ಯ ದಾಖಲೆಗಳು ಹಾಗೂ ಹೊಸ ಫೋಟೋಗಳೊಂದಿಗೆ ಸಲ್ಲಿಕೆ ಮಾಡಬೇಕು. ಇದು ಮತದಾರರ ಕರ್ತವ್ಯವಾಗಿದೆ. ಈ ಅರ್ಜಿ ಸಲ್ಲಿಕೆ ಮಾಡದಿದ್ದರೆ, ಮತದಾನದ ಹಕ್ಕು ಕಳೆದುಕೊಳ್ಳುತ್ತೀರಿ. ಆಗಸ್ಟ್ 5ರಂದು ಕರಡು ಮತಪಟ್ಟಿ ಪ್ರಕಟಿಸಲಾಗುವುದು. ಬಿಎಲ್ಓಗಳು ಮೂರು ಬಾರಿ ನಿಮ್ಮ ಮನೆಗೆ ಬಂದು ಅರ್ಜಿ ನೀಡುತ್ತಾರೆ. ನೀವು ಅರ್ಜಿ ಸ್ವೀಕರಿಸಿ ಸಲ್ಲಿಸದಿದ್ದರೆ ಹಕ್ಕು ಕಳೆದುಕೊಳ್ಳುತ್ತೀರಿ” ಎಂದು ಎಚ್ಚರಿಸಿದರು.
ಬಳಿಕ ಮಾತನಾಡಿದ ಮನ್ಮುಲ್ ಅಧ್ಯಕ್ಷ ಯು.ಸಿ.ಶೇಖರ್, ನೆರೆ ಹೊರೆ ರಾಜ್ಯಗಳಿಂದ ಬಂದಿರುವ ವಲಸೆ ಮತದಾರರ ಪತ್ತೆಗೆ ಈ ವ್ಯವಸ್ಥೆ ನಡೆಯುತ್ತಿದೆ, ಪ್ರತಿ ಬೂತ್ ಮಟ್ಟದಲ್ಲಿ ಎಲ್ಲರ ಸಹಕಾರಿಂದ ಯಶಸ್ಸಿಗೊಳಿಸಿಸೋಣ ಎಂದು ನುಡಿದರು.
“ಮತದಾನದ ಹಕ್ಕು ಕಳೆದುಕೊಳ್ಳುವವರು ಮುಂದೆ ಸರ್ಕಾರದ ಸೌಲಭ್ಯ ಸಿಗುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಪಡಿತರ ಹಂಚಿಕೆಯಲ್ಲಿ ಮತದಾರರಿಗೆ ಮಾತ್ರ ನೀಡಲಾಗುತ್ತಿದೆ. ಇದೇ ರೀತಿ ಬೇರೆ ರಾಜ್ಯಗಳಲ್ಲೂ ಆದೇಶ ಹೊರಡಿಸಲಾಗಿದೆ ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿಶ್ವನಾಥ್, ಆರ್ಐ ಮಂಜುನಾಥ್, ಪಿಡಿಓ ಮಂಜು, ಪ್ರದೀಶ್, ಗ್ರಾಮ ಆಡಳಿತ ಅಧಿಕಾರಿ ತಾಲೂಕುಅಧ್ಯಕ್ಷ ಕುಮಾರ್, ಆರ್ಎಪಿಸಿಎಂಎಸ್ ಅಧ್ಯಕ್ಷ ಯು.ಸಿ.ಶೇಖರ್ ಮತ್ತಿತರರಿದ್ದರು.

Leave a Reply