Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ : ಶಿವರಾಮೇಗೌಡ

ಮಾ. 21ರಿಂದ SSLC ಪರೀಕ್ಷೆ ನಡೆಯುತ್ತಿರುವ ಹಿನ್ನಲೆಯಲ್ಲಿ ಮಂಡ್ಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ ತಿಳಿಸಿದರು.

ಜನರ ಧ್ವನಿ ಯೊಂದಿಗೆ ಮಾತನಾಡಿದ ಅವರು , ಮಾರ್ಚ್‌ 21 ರಿಂದ ಏಪ್ರಿಲ್ 4ರ ತನಕ SSLC ಪರೀಕ್ಷೆಗಳು ನಡೆಯಲಿದೆ , ಮಂಡ್ಯದಲ್ಲಿ ಈ ಬಾರಿ ಸುಮಾರು 20469 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ 10661 ಬಾಲಕರು ಹಾಗೂ 9835 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಪುನರಾವರ್ತಿತ 555 ಮತ್ತು ಖಾಸಗಿಯಾಗಿ 192 ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗಿಯಾಗಲಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಒಟ್ಟು 21278 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಲಿದ್ದಾರೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪರೀಕ್ಷೆ ನಡೆಯಲಿದೆ.ಜಿಲ್ಲೆಯಲ್ಲಿ 62 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ , ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದ್ದು,ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ , ಪರೀಕ್ಷಾ ಕೇಂದ್ರಗಳ ಬಳಿ ಬಿಗಿ ಪೊಲೀಸ್ ಬಂದ್ ಬಸ್ತ್ ಮಾಡಲಾಗಿದ್ದು , 200 ಸುತ್ತಮುತ್ತಲಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಹೇಳಿದರು.

ಮೂಲಭೂತ ಸೌಕರ್ಯಗಳ ವ್ಯವಸ್ಥೆ, ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು,ಪರೀಕ್ಷೆ ಅಕ್ರಮ ತಡೆಯಲು ಇಲಾಖೆ ಕಠಿಣ ಕ್ರಮ ತೆಗೆದುಕೊಂಡಿದೆ. ಪರೀಕ್ಷೆ ನಡೆಯುವ ರೂಮ್ಗಳಲ್ಲಿ ವೆಬ್ ಕ್ಯಾಸ್ಟಿಂಗ್ ಹಾಗೂ ಸಿಸಿಟಿವಿ ಕ್ಯಾಮೆರಾಗಳ ಹದ್ದಿನ ಕಣ್ಣು ಸೇರಿದಂತೆ  ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಶುಭಕೋರಿದರು.

Leave a Reply

Your email address will not be published. Required fields are marked *

error: Content is protected !!