
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ಒದಗಿಸುವುದು ಸಮಾಜದ ಕರ್ತವ್ಯವಾಗಿದೆ. ಮಕ್ಕಳು ದೇಶದ ಭವಿಷ್ಯ. ಅವರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ತಿಳಿಸಿದರು.
ಇಂದು ಗಾಂಧಿಭವನದಲ್ಲಿ ಮಂಡ್ಯ ಜಿಲ್ಲಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ,ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ(ರಿ) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ – 2026 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಕೈಯಲ್ಲಿ ಪುಸ್ತಕವಿರಬೇಕು. ಮಕ್ಕಳಲ್ಲಿ ಕಣ್ಣಲ್ಲಿ ಕನಸುಗಳು ಇರಬೇಕು ಹಾಗೂ ಭವಿಷ್ಯದ ಬಗ್ಗೆ ಯೋಚಿಸುವ ಮನಸ್ಸು ಇರಬೇಕು. ಮಕ್ಕಳ ಕಣ್ಣಲ್ಲಿ ಜೀವನದ ದುಖದ ಭಾರ ಇರಬಾರದು. ಮನೆಯ ತೊಂದರೆ, ಕೆಲಸದ ಸಲಕರಣೆಗಳು ಇರಬಾರದು. ಇತಂಹ ಬಾಲ ಕಾರ್ಮಿಕ ಪದ್ಧತಿಯನ್ನು ಎಲ್ಲರೂ ವಿರೋಧಿಸಬೇಕು.
ಇಂದಿಗೂ ವಿಶ್ವದಲ್ಲಿ ಶಾಲೆಗೆ ಹೋಗುವ ಬದಲು ಕಾರ್ಖಾನೆಗಳಲ್ಲಿ, ಹೋಟೇಲ್ ಗಳಲ್ಲಿ, ಮನೆಗಳಲ್ಲಿ ಗಣಿ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲ ಮಕ್ಕಳನ್ನು ಶಾಲೆಗೆ ಕರೆದುಕೊಂಡುಹೋಗುವುದು ನಮ್ಮೆಲ್ಲರ ಧರ್ಮ ಹಾಗೂ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂಬ ಉದ್ದೇಶದಿಂದ ಜೂನ್ 12 ರಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲೆ ಹೋಗುವ ಮಕ್ಕಳ ವಯಸ್ಸಿನಲ್ಲಿ ಮಾನಸಿಕ, ದೈಹಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಹಾನಿಯಾಗುವಂತಹ ಕೆಲಸಗಳಿಗೆ ತೊಡಗಿಕೊಳ್ಳುವುದನ್ನು ಬಾಲ ಕಾರ್ಮಿಕತ್ವ ಅಂತಾ ಕರೆಯಲಾಗುವುದು. ಇದಕ್ಕೆ ಬಡತನ ಕಾರಣವಾಗಿದ್ದು ಪೋಷಕರಲ್ಲಿ ಶಿಕ್ಷಣದ ಕೊರತೆ ಸಾಮಾಜಿಕ ಅಸಮಾನತೆ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಅರಿವಿನ ಕೊರತೆ ಈ ಎಲ್ಲಾ ಕಾರಣಗಳಿಂದ ಬಾಲಕಾರ್ಮಿಕ ಪದ್ಧತಿ ಇರುವುದು ಮುಂದುವರೆಯುತ್ತಿರುವುದನ್ನು ಕಾಣಬಹುದಾಗಿದೆ ಎಂದು ಅವರು ತಿಳಿಸಿದರು.
ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಶೋಷಣೆ ಉಂಟಾಗಿ ಅವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಭವಿಷ್ಯದಲ್ಲಿ ಉತ್ತಮ ಅವಕಾಶ ಕಳೆದುಕೊಳ್ಳುತ್ತಾರೆ. ಇದರಿಂದ ಕೊನೆಯದಾಗಿ ದೇಶದ ಮಾನವ ಸಂಪನ್ಮೂಲದಕ್ಕೆ ಹಿನ್ನೆಡೆಯಯಾಗುತ್ತದೆ. ಆದುದರಿಂದ 14 ವರ್ಷ ಒಳಗಿನ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ತೊಡಗಿಸಿಕೊಳ್ಳಬಾರದು ಎಂದು ಅವರು ತಿಳಿಸಿದರು.
ಇಡೀ ದೇಶದ ನಿಜವಾದ ಸಂಪತ್ತು ಮತ್ತು ಭವಿಷ್ಯದ ಅಡಿಪಾಯ. ದೇಶದ ಪ್ರಗತಿ ಮತ್ತು ಅಭಿವೃದ್ಧಿಯು ಮಕ್ಕಳ ಉತ್ತಮ ಶಿಕ್ಷಣ, ಆರೋಗ್ಯ ಅವಲಂಬಿಸಿರುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸವಿತಾ ಅವರು ಮಾತನಾಡಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಉದ್ದಿಮೆಗಳಲ್ಲಿ ಕೆಲಸಕ್ಕೆ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅವರು ತಿಳಿಸಿದರು.
ಅಷ್ಟೇ ಅಲ್ಲದೇ, 14ರಿಂದ 18ರ ನಡುವಿನ ವಯೋಮಾನದ ಮಕ್ಕಳನ್ನು ಅಪಾಯಕಾರಿ ಕೆಲಸಕ್ಕೆ ಇರಿಸಿಕೊಳ್ಳುವುದೂ ಅಪರಾಧವಾಗಿದೆ. ಗಣಿಗಾರಿಕೆ, ಸ್ಫೋಟಕ ಮತ್ತು ದಹ್ಯ ಪದಾರ್ಥಗಳು ಒಳಗೊಂಡಿರುವ ಯಾವುದೇ ರೀತಿಯ ಕೆಲಸಗಳಲ್ಲಿ ಮಕ್ಕಳನ್ನು ತೊಡಗಿಸುವುದೂ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅವರು ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗೋಡೆ ಬರಹ, ಆಟೋ ಪ್ರಚಾರ ಹಾಗೂ ಜಾಧಾಗಳ ಮೂಲಕ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಆನಂದ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್, ಮಂಡ್ಯ ಜಿಲ್ಲಾ ವಕೀಲರ ಸಂಘದ ಪ್ರಸ್ತುತ ಅಧ್ಯಕ್ಷರು ಟಿ.ಎಸ್. ಸತ್ಯಾನಂದ, ಡಿಡಿಪಿಎ ಲೋಕೇಶ್ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ನಿರ್ದೇಶಕ ಪ್ರಭಾಕರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply