Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪಂಜಿನ ಮೆರವಣಿಗೆ

ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ಪಂಜಿನ ಮೆರವಣಿಗೆ ನಡೆಸಿದರು.
ಪಂಜಿನ ಮರವಣಿಗೆಗೂ ಮುನ್ನ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಅವರು ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಒಂದು ಕೊಲೆ ಆರೋಪಿಗಳು ಎಲ್ಲೇ ಇದ್ದರೂ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಪೋಲಿಸ್ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಕೊಲೆ ಆರೋಪಿಗಳಿಂದ ಅವರ ಕುಟುಂಬಸ್ಥರಿಗಾಗಲಿ, ಗ್ರಾಮಸ್ಥರಿಗಾಗಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.
ಪಂಜಿನ ಮೆರವಣಿಗೆಯು ಮೃತ ಯೋಗೇಶ್ ಮನೆಯಿಂದ ಪ್ರಾರಂಭವಾಗಿ ಶ್ರೀ ಕಾಲಭೈರವೇಶ್ವರ ಸ್ವಾಮಿಯ ದೇವಸ್ಥಾನದವರೆಗೂ ನಡೆಯಿತು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳಾದ ರಮೇಶ್, ದೊರೆಸ್ವಾಮಿ, ದೇವರಾಜು, ರವಿಕುಮಾರ್, ಲಿಂಗರಾಜು, ಯಶವಂತ್, ಮನೋಜ್, ಸ್ವಾಮಿ ಗ್ರಾಮದ ಮುಖಂಡರುಗಳು, ಕುಟುಂಬಸ್ಥರು ಭಾಗವಹಿಸಿದ್ದರು.
ಪಂಜಿನ ಮೆರವಣಿಗೆ ವೇಳೆ ಪೊಲೀಸ್ ಬಿಗಿ ಬಂದು ಬಸ್ತ್   ಏರ್ಪಡಿಸಲಾಗಿತ್ತು

Leave a Reply

Your email address will not be published. Required fields are marked *

error: Content is protected !!