Janaradwani

ಸುದ್ದಿ, ಮಾಹಿತಿ, ರಾಜಕೀಯ, ಸಮಸ್ಯೆ

ಜಿ. ಪಂ ಸಿಇಓ ಶೇಕ್ ತನ್ವೀರ್ ಆಸೀಫ್ ರವರಿಗೆ ಅತ್ಮೀಯ ಬೀಳ್ಕೊಡುಗೆ

ಸುಮಾರು 2 ವರ್ಷಗಳ ಕಾಲ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರಿಗೆ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ‌ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆತ್ಮೀಯವಾಗಿ ಬೀಳ್ಕೂಡಲಾಯಿತು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಶೇಖ್ ತನ್ವೀರ್ ಆಸಿಫ್ ಅವರ ಸರಳತೆ, ವ್ಯಕ್ತಿತ್ವ, ಜ್ಞಾನ, ಶಾಂತ ಸ್ವಭಾವ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೆಲಸ ಮಾಡಲು ನೀಡುತ್ತಿದ್ದ ಸ್ಪೂರ್ತಿ ಶ್ಲಾಘನೀಯ. ಅವರಲ್ಲಿ ಇರುವ ಜ್ಞಾನದ ಅಭಿರುಚಿ ಹಾಗೂ ವ್ಯಕ್ತಿತ್ವ ಅವರಿಗೆ ಸಮಾಜದಲ್ಲಿ ಒಳ್ಳೆಯ ಹೆಸರನ್ನು ತಂದುಕೊಡುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ ಶೇಖ್ ತನ್ವೀರ್ ಆಸಿಫ್ ಅವರು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ರೀತಿ ಹಾಗೂ ಸಮ್ಮೇಳನದ ಸಮಯದಲ್ಲಿ ಸಂಚಾರಿ ನಿಯಮಗಳನ್ನು ರೂಪಿಸಲು ನೀಡಿದ ಸಲಹೆಗಳನ್ನು ಮೆಲಕು ಹಾಕಿದರು.

ಮೈಸೂರು ಮಹನಾಗರ ಪಾಲಿಕೆ ಆಯುಕ್ತರಾಗಿರುವ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ‌ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ನಾನು ಮಂಡ್ಯ ಜಿಲ್ಲೆಯ ಮಣ್ಣಿನ ಮಗನಾಗಿದ್ದೇನೆ ಎಂದು  ಮಂಡ್ಯ ಜಿಲ್ಲೆಯಲ್ಲಿ ಮಾಡಿದ ಕೆಲಸದ ಸವಿನೆನಪುಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಶ್ರೀನಿವಾಸ್, ಉಪಕಾರ್ಯದರ್ಶಿ ಬಾಬು, ಮುಖ್ಯ ಯೋಜನಾಧಿಕಾರಿ ಧನುಷ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!